ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಮಕ್ಕಳ ಬೆಳವಣಿಗೆಯಲ್ಲಿ ಅಂಗನವಾಡಿ ಕಲಿಕೆ ಬಹು ಮುಖ್ಯ ಘಟ್ಟ"

ಮಂಗಳೂರು: ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅಂಗನವಾಡಿ ಕೇಂದ್ರದ ಕಲಿಕೆ ಪ್ರಮುಖ ಘಟ್ಟ. ಮಕ್ಕಳ ಪ್ರಥಮ ಪಾಠಶಾಲೆ ಅಂಗನವಾಡಿಯಾಗಿರುವುದರಿಂದ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಇಂತಹ ಅಂಗನವಾಡಿಗಳು ಸಹಕಾರಿ ಎಂದು ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಹೇಳಿದರು.

ಅವರು ಪಡುಪೆರಾರ ಗ್ರಾಪಂ ವ್ಯಾಪ್ತಿಯ ಗುರುಕಂಬಳ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು‌. ಪಂಚಾಯಿತಿ ಅಧ್ಯಕ್ಷೆ ಅಮಿತಾ ಶೆಟ್ಟಿ, ಜಿಪಂ ಸದಸ್ಯ ಜನಾರ್ದನ ಗೌಡ, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಚೇತನ್ ಕುಮಾರ್, ಬಾಲ ವಿಕಾಸ ಸಮಿತಿ ಸದಸ್ಯರು, ಸ್ತ್ರೀ ಶಕ್ತಿ ಸದಸ್ಯರು, ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

19/02/2021 07:50 pm

Cinque Terre

3.25 K

Cinque Terre

0

ಸಂಬಂಧಿತ ಸುದ್ದಿ