ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: "ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಂಯಮ ಅಳವಡಿಸಿಕೊಳ್ಳಿ"

ಮುಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ದೇವಳ ಆಡಳಿತ ಸಮಿತಿ ಅಧ್ಯಕ್ಷ, ಕಾಲೇಜಿನ ಸಂಚಾಲಕ ಕೊಡೆತ್ತೂರುಗುತ್ತು ಸನತ್‌ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು- ಸಂಯಮವನ್ನು ಅಳವಡಿಸಿಕೊಳ್ಳುವುದರ ಮೂಲಕ ರಾಷ್ಟ್ರಕ್ಕೆ ಹಾಗೂ ಕಾಲೇಜಿಗೆ ಮಾದರಿಯಾಗಬೇಕು ಎಂದರು.

ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ಆಶೀರ್ವಚನ ನೀಡಿದರು. ಕಾಲೇಜಿನ ಹಳೆವಿದ್ಯಾರ್ಥಿ ಬೆಂಗಳೂರಿನ ಸಿಎ ಚಂದ್ರಶೇಖರ್ ಶೆಟ್ಟಿ ಉಪನ್ಯಾಸ ನೀಡಿದರು. ಪ್ರಾಂಶುಪಾಲ ಡಾ.ಕೃಷ್ಣ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ವಿದ್ಯಾರ್ಥಿ ಸಂಘ ಅಧ್ಯಕ್ಷ ಸುದರ್ಶನ್ ಪೆಜತ್ತಾಯ, ಉಪಾಧ್ಯಕ್ಷ ವಿಘ್ನೇಶ್ ಆಚಾರ್ಯ, ಕಾರ್ಯದರ್ಶಿಗಳಾದ ಜೀವನ್ ಹಾಗೂ ಚೈತನ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ವಿಜಯ್ ವಿ. ಸ್ವಾಗತಿಸಿದರು. ಆದರ್ಶ್ ಪ್ರಾರ್ಥಿಸಿದರು. ಚೈತನ್ಯ ವಂದಿಸಿದರು. ಜಯಶ್ರೀ ನಿರೂಪಿಸಿದರು.

Edited By : Nirmala Aralikatti
Kshetra Samachara

Kshetra Samachara

22/02/2021 05:00 pm

Cinque Terre

5.6 K

Cinque Terre

0

ಸಂಬಂಧಿತ ಸುದ್ದಿ