ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಡುಪಣಂಬೂರು, ಬೆಳ್ಳಾಯರು, 10ನೇ ತೋಕೂರು ವಾರ್ಡ್ ಗಳಲ್ಲಿ 'ನಮ್ಮ ಗ್ರಾಮ ನಮ್ಮ ಯೋಜನೆ' ವಿಶೇಷ ಗ್ರಾಮ ಸಭೆ ನಡೆಯಿತು.
ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಬೆಳ್ಳಾಯರು ವಾರ್ಡ್ ನಲ್ಲಿ ನಡೆದ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಸದಸ್ಯ ವಿನೋದ್ ಸಾಲ್ಯಾನ್ ಬೆಳ್ಳಾಯರು ವಹಿಸಿ ಮಾತನಾಡಿ, ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದ ನಾಗರಿಕರ ಮೂಲಭೂತ ಸೌಕರ್ಯಗಳ ಸಹಿತ ಅಭಿವೃದ್ಧಿ ಬಗ್ಗೆ ಗಮನ ಹರಿಸಲಾಗುವುದು ಎಂದರು.
ಸಭೆಯಲ್ಲಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಆಯುಷ್ಮಾನ್ ಕಾರ್ಡ್ ಕಡ್ಡಾಯ ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಪಂಚಾಯತ್ ವ್ಯಾಪ್ತಿಯ ಬೆಳ್ಳಾಯರು ಕೆರೆಕಾಡಿನಲ್ಲಿ ಶಾಲೆಗೆ ಹೊಸ ಕಟ್ಟಡ, ನೂತನ ಹೈಸ್ಕೂಲ್ ನಿರ್ಮಾಣ, ತೋಡಿನ ಹೂಳೆತ್ತುವಿಕೆ, ಚರಂಡಿ ರಚನೆಯ ಬೇಡಿಕೆಗಳನ್ನು ಮಂಡಿಸಲಾಯಿತು. ಪಡುಪಣಂಬೂರು ವಾರ್ಡ್ ನಲ್ಲಿ ನಡೆದ ಸಭೆಯಲ್ಲಿ ಫಲಾನುಭವಿಗಳಿಗೆ ಸಹಾಯಧನ ವಿತರಿಸಲಾಯಿತು.
ಪಂಚಾಯತ್ ಸದಸ್ಯರಾದ ಉಮೇಶ್ ಪೂಜಾರಿ, ಅಭಿವೃದ್ಧಿ ಅಧಿಕಾರಿ ರಮೇಶ್ ನಾಯ್ಕ ಕಾರ್ಯದರ್ಶಿ ಲೋಕನಾಥ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
06/01/2022 03:00 pm