ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪಣಂಬೂರು: ಜಾತ್ರಾ ಮಹೋತ್ಸವದ ಪ್ರಯುಕ್ತ ಧ್ವಜಾರೋಹಣದ ಸಂಭ್ರಮ

ಮುಲ್ಕಿ: ಪಡುಪಣಂಬೂರು ಸಮೀಪದ ಕಲ್ಲಾಪು ಶ್ರೀ ವೀರಭದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಧ್ವಜಾರೋಹಣ ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಿತು.

ಮಂಗಳವಾರ ಬೆಳಿಗ್ಗೆ ಕ್ಷೇತ್ರದಲ್ಲಿ ಗಣಹೋಮ, ಶ್ರೀ ದೇವರಿಗೆ ಕಲಶಾಭಿಷೇಕ ಹಾಗೂ ಶ್ರೀದೇವರ ಧ್ವಜಾರೋಹಣ, ಮಧ್ಯಾಹ್ನ ಮಹಾಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ ದೇವಸ್ಥಾನದ ಅರ್ಚಕರು ಹಾಗೂ ಗುರಿಕಾರರು ಉಪಸ್ಥಿತರಿದ್ದರು.

ಫೆ.16 ಬುಧವಾರ ಕ್ಷೇತ್ರದಲ್ಲಿ ಸಾಮೂಹಿಕ ಹೂವಿನ ಪೂಜೆ, ಶ್ರೀ ದೇವರ ಬಲಿ ಉತ್ಸವ, ಫೆ.17ರಂದು ಗುರುವಾರ ಅನ್ನಸಂತರ್ಪಣೆ, ಶ್ರೀ ವೀರಭದ್ರ ಸ್ವಾಮಿಯ ಜಾತ್ರಾ ಮಹೋತ್ಸವ,i ಧ್ವಜಾವರೋಹಣ, ಫೆ.18 ಶುಕ್ರವಾರ ಚಂಡಿಕಾಯಾಗ, ರಾತ್ರಿ ಮಾರಿ ಪೂಜಾ ಮಹೋತ್ಸವ, ಹಾಗೂ ಶ್ರೀ ಧೂಮಾವತಿ ಬಂಟ ದೈವಗಳ ನೇಮೋತ್ಸವ ನಡೆಯಲಿದೆ.

Edited By : PublicNext Desk
Kshetra Samachara

Kshetra Samachara

15/02/2022 04:59 pm

Cinque Terre

1.84 K

Cinque Terre

0

ಸಂಬಂಧಿತ ಸುದ್ದಿ