ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಹಠಾತ್ ವರ್ಗಾವಣೆ

ಮಂಗಳೂರು: ಅಕ್ರಮ ಬಾಕ್ಸೈಟ್ ಗಣಿಗಾರಿಕೆಯಲ್ಲಿ ತೊಡಗಿದ್ದವರಿಗೆ ಬಿಸಿ ಮುಟ್ಟಿಸಿದ್ದ ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಸಿ. ಅವರನ್ನು ಹಠಾತ್ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

ಮದನ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ರವಿಚಂದ್ರ ನಾಯಕ್ ಅವರನ್ನು ನಿಯೋಜಿಸಲಾಗಿದೆ ಎಂದು ಸರಕಾರ ಆದೇಶದಲ್ಲಿ ತಿಳಿಸಿದೆ.

ವರ್ಗಾವಣೆಗೊಂಡ ಮದನ್ ಮೋಹನ್ ಸಿ. ಅವರು ಕೆಲದಿನಗಳ ಹಿಂದೆ ಅಕ್ರಮವಾಗಿ ಬಾಕ್ಸೈಟ್ ಗಣಿಗಾರಿಕೆಯಲ್ಲಿ ತೊಡಗಿದ್ದವರನ್ನು ಪತ್ತೆಹಚ್ಚಿ ಅವರಿಂದ ಲಾರಿಗಳು ಹಾಗೂ ಹಲವು ರೀತಿಯ ವಾಹನಗಳು ಸೇರಿ ಸುಮಾರು 30ಕ್ಕೂ ಅಧಿಕ ವಾಹನಗಳನ್ನು ವಶಕ್ಕೆ ಪಡೆದಿದ್ದರು.

ಆ ದಿನಗಳಿಂದಲೇ ಅವರನ್ನು ಮಂಗಳೂರು ಉಪವಿಭಾಗದಿಂದ ಎತ್ತಂಗಡಿ ಮಾಡುವ ಬಗ್ಗೆ ಗಣಿ ಧಣಿಗಳು ಜನಪ್ರತಿನಿಧಿಗಳ ಮೂಲಕ ಸರಕಾರಕ್ಕೆ ಒತ್ತಡ ಹಾಕುತ್ತಿದ್ದರು ಎನ್ನಲಾಗಿದೆ.

ಇದರ ಫಲವಾಗಿಯೇ ಮಂಗಳೂರು ಉಪವಿಭಾಗಾಧಿಕಾರಿಯಾಗಿದ್ದ ಮದನ್ ಮೋಹನ್ ಅವರನ್ನು ಹಠಾತ್ ವರ್ಗಾವಣೆ ಮಾಡಲಾಗಿದೆ ಎಂಬ ಮಾತು ಕೇಳಿ ಬರುತ್ತಿವೆ. ಆದರೆ, ಕರ್ನಾಟಕ ಆಡಳಿತ ನ್ಯಾಯಮಂಡಳಿ ಹೊರಡಿಸಿದ ಆದೇಶ ಜಾರಿಗೆ ತರುವ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಸಮಜಾಯಿಷಿ ನೀಡಿದೆ.

Edited By :
Kshetra Samachara

Kshetra Samachara

14/10/2020 05:08 pm

Cinque Terre

4.95 K

Cinque Terre

0

ಸಂಬಂಧಿತ ಸುದ್ದಿ