ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಉಚ್ಛ ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಅನಧಿಕೃತವಾಗಿ ಆಳವಡಿಸಲಾಗಿರುವ ಬ್ಯಾನರ್ ತೆರವು ಮಾಡಲು ವಿಫಲವಾದ ಪಿಡಿಓ ಮತ್ತು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ವಿರುದ್ಧ ಬೆಳ್ತಂಗಡಿ ತಾಲೂಕು ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಶೇಖರ್ ಎಲ್ ಲಾಯಿಲ ತಾಲೂಕು ಪಂಚಾಯತ್ ಕಛೇರಿ ಬೆಳ್ತಂಗಡಿ ಮುಂಭಾಗದಲ್ಲಿ ಬ್ಯಾನರ್ ಹಾಕಿಕೊಂಡು ಏಕಾಂಗಿಯಾಗಿ ಕುಳಿತು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಕಳೆದ 6 ತಿಂಗಳಿನಿಂದ ನಿರಂತರವಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳಲು ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಮೊದಲಾದವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ.
ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿಯವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರೂ ಅವರ ಆದೇಶಗಳನ್ನು ಪಾಲಿಸುತ್ತಿಲ್ಲ. ಇದರ ವಿರುದ್ಧ ಬ್ಯಾನರ್ ತೆರವು ಮಾಡುವವರೆಗೂ ಏಕಾಂಗಿಯಾಗಿ ಹೋರಾಟ ನಡೆಸುತ್ತೇನೆ ಎಂದು ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಶೇಖರ್ ಎಲ್ ಲಾಯಿಲ ಹೇಳಿಕೆ ನೀಡಿದ್ದಾರೆ.
Kshetra Samachara
05/10/2020 04:05 pm