ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಡಿ.19ರಂದು ದ.ಕ. ಜಿಲ್ಲೆಯ ಎಲ್ಲ ಕೋರ್ಟ್ ಗಳಲ್ಲಿ ಇ-ಲೋಕ್ ಅದಾಲತ್

ಮಂಗಳೂರು: ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಡಿ.19ರಂದು ದ.ಕ. ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬೃಹತ್ ಇ-ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ. ಮುರಳೀಧರ ಪೈ ತಿಳಿಸಿದ್ದಾರೆ.

ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ತೀರ್ಮಾನಕ್ಕೆ ಬಾಕಿ ಇರುವ ಮತ್ತು ವ್ಯಾಜ್ಯ ಪೂರ್ವ ಎಲ್ಲ ಸಿವಿಲ್ ರೂಪದ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧ, ಚೆಕ್‌ ಬೌನ್ಸ್, ಮೋಟಾರು ವಾಹನ ಕಾಯ್ದೆಯಡಿ ಪರಿಹಾರಕ್ಕಾಗಿ ಸಲ್ಲಿಸಿದ ಅರ್ಜಿಗಳು, ಭೂ ಸ್ವಾಧೀನ ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣ ಇತ್ಯಾದಿಗಳನ್ನು ಬೃಹತ್ ಲೋಕ ಅದಾಲತ್ ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.

ವ್ಯಾಜ್ಯ ಪೂರ್ವ ಪ್ರಕರಣಗಳಿಗೆ ಸಂಬಂಧಿಸಿ ಯಾವುದೇ ನ್ಯಾಯಾಲಯ ಶುಲ್ಕ ಪಾವತಿಸಬೇಕಾಗಿಲ್ಲ. ಸಾರ್ವಜನಿಕರು ನೇರವಾಗಿ ಅಥವಾ ತಮ್ಮ ವಕೀಲರ ಮೂಲಕ ಲೋಕ್ ಅದಾಲತ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು.

ಅಗತ್ಯವಿದ್ದರೆ ಪಕ್ಷಕಾರರ ಸಮ್ಮತಿಯನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಪಡೆದುಕೊಳ್ಳಲಾಗುವುದು. ಪಕ್ಷಕಾರರು ಲೋಕ್ ಅದಾಲತ್‌ನಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ಅವರು ನ್ಯಾಯಾಲಯಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ವಾಪಸ್ ಪಡೆಯಲು ಅರ್ಹರಾಗಿರುತ್ತಾರೆ ಎಂದರು.

Edited By : Nirmala Aralikatti
Kshetra Samachara

Kshetra Samachara

08/12/2020 12:53 pm

Cinque Terre

5.32 K

Cinque Terre

0

ಸಂಬಂಧಿತ ಸುದ್ದಿ