ಕಡಬ: ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಕೊಲೆಯನ್ನು ಖಂಡಿಸಿ, ಪ್ರಕರಣವನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಡಬ ತಾಲೂಕು ಸಂಘಟನೆಯು ತಹಶೀಲ್ದಾರ್ ಮೂಲಕ ಮಂಗಳವಾರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದೆ.
ಉತ್ತರ ಪ್ರದೇಶದ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಕ್ರಮಗಳು ಆರೋಪಿಗಳನ್ನು ರಕ್ಷಣೆ ಮಾಡಿರುವಂತೆ ಅನುಮಾನ ಮೂಡಿದೆ. ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಮರಣ ದಂಡನೆಯನ್ನು ವಿಧಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ವೇಳೆ ಸಂಘಟನೆಯ ಸಂಚಾಲಕ ವಸಂತ ಕುಬುಲಾಡಿ, ಮಹಿಳಾ ಸಂಚಾಲಕಿ ಸುಂದರಿ ಸುರೇಶ್ ಸೇರಿದಂತೆ ಸಂಘಟನಾ ಸಂಚಾಲಕರು ಹಾಜರಿದ್ದರು.
Kshetra Samachara
06/10/2020 04:06 pm