ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವರದಿಗಾರರ ಮೇಲೆ ಹಲ್ಲೆ ಕೇಸ್; ಡಿಸಿಯಿಂದ ಸೂಕ್ತ ಕ್ರಮದ ಭರವಸೆ

ದ.ಕ.ಜಿಲ್ಲೆಯ ಉಪ್ಪಿನಂಗಡಿ ಸರಕಾರಿ ಕಾಲೇಜಿನ ಹಿಜಾಬ್ ವಿವಾದದ ಬಗ್ಗೆ ವರದಿಮಾಡಲೆಂದು ತೆರಳಿದ್ದ ವರದಿಗಾರರ ಮೇಲೆ ಹಲ್ಲೆ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಮಾಧ್ಯಮ ಸ್ವಾತಂತ್ರ್ಯದ ರಕ್ಷಣೆ ಹಾಗೂ ಹಲ್ಲೆ ನಡೆಸಿರುವ ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ನೀಡಿದ ಮನವಿಯನ್ನು ಸ್ವೀಕರಿಸಿ ಜಿಲ್ಲಾಧಿಕಾರಿ ಮಾತನಾಡಿದರು.

ಹಿಜಾಬ್ ವಿವಾದ ಹಾಗೂ ಆ ಬಳಿಕದ ಘಟನೆಗಳ ವಾಸ್ತವ ವರದಿಯನ್ನು ಮಾಡಲು ವರದಿಗಾರರು ತೆರಳಿದ್ದರು. ಈ ವೇಳೆ ಕಾಲೇಜಿನ ಕೆಲ ವಿದ್ಯಾರ್ಥಿಗಳು ವರದಿಗಾರರಿಗೆ ದಿಗ್ಬಂಧನ ಮಾಡಿ ದುರ್ವರ್ತನೆ ತೋರಿಸಿದ್ದಾರೆ. ಆದ್ದರಿಂದ ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರಕಾರ ಪತ್ರಕರ್ತರಿಗೆ ಸೂಕ್ತ ಭದ್ರತೆ ನೀಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮನವಿ ಮಾಡಿದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಭಗವಾನ್ ಹೃಷಿಕೇಶ್ ಸೋನಾವಣೆ ಅವರಿಗೂ ಮನವಿ ಸಲ್ಲಿಸಲಾಯಿತು. ಇದೀಗ 25 ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

03/06/2022 08:12 pm

Cinque Terre

3.69 K

Cinque Terre

0

ಸಂಬಂಧಿತ ಸುದ್ದಿ