ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಲ ಕಾರ್ಮಿಕರ‌ ನೇಮಕಕ್ಕೆ ನಿಷೇಧ ಹಿನ್ನೆಲೆ: ಕಾರ್ಮಿಕ ಇಲಾಖೆಯಿಂದ ವಿವಿಧೆಡೆ ದಾಳಿ

ಮಂಗಳೂರು: ಬಾಲ‌ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ನಿಷೇಧಿಸಲಾಗಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ನಗರದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ನಗರದ ಅಪಾರ್ಟ್‌ಮೆಂಟ್‌ಗಳು, ಹೊಟೇಲ್, ಗ್ಯಾರೇಜ್‌ಗಳಿಗೆ ಅನಿರೀಕ್ಷಿತ ದಾಳಿ ನಡೆಸಿ 15ರಿಂದ 18 ವರ್ಷದೊಳಗಿನ ಬಾಲ‌ಕಾರ್ಮಿಕರನ್ನು ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಕಾಯ್ದೆ ಉಲ್ಲಂಘಿಸಿದ ಮಾಲಕರಿಗೆ 50,000 ರೂ.ವರೆಗೆ ದಂಡ ಹಾಗೂ ಎರಡು ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಎಚ್ತಚರಿಕೆಯ ಸಂದೇಶವನ್ನು ರವಾನಿಸಿತು. ಅಲ್ಲದೆ, ಬಿತ್ತಿ ಪತ್ರಗಳನ್ನು ಅಂಟಿಸಿ ಜಾಗೃತಿ‌ ಮೂಡಿಸಿತು.

ದಾಳಿಯಲ್ಲಿ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೋ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಜೀವನ್ ಕುಮಾರ್, ಮೇರಿ ಪಿ. ಡಯಾಸ್, ವಿರೇಂದ್ರ ಕುಂಬಾರ್ ಹಾಗೂ ಯೋಜನಾ ನಿರ್ದೇಶಕ ಶ್ರೀನಿವಾಸ್ ಮೊದಲಾದವರು ಪಾಲ್ಗೊಂಡಿದ್ದರು.

Edited By : Nagaraj Tulugeri
Kshetra Samachara

Kshetra Samachara

16/12/2020 09:36 am

Cinque Terre

7.03 K

Cinque Terre

0

ಸಂಬಂಧಿತ ಸುದ್ದಿ