ಧ್ವನಿವರ್ಧಕ ಬಳಕೆಗಳ ವಿಪರೀತಕ್ಕೆ ಕಡಿವಾಣ ಹಾಕಲು ಸರ್ಕಾರ ನಿರ್ಧಾರ ಮಾಡಿದ್ದು ಅದರಂತೆ ಮಂಗಳೂರು ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು ಹೊರಡಿಸುವ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ.
ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಬ್ದ ಮಾಲಿನ್ಯ ಆಕ್ಟ್ 1986ರಡಿಯಲ್ಲಿ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು ಉಪಯೋಗಿಸಬಾರದೆಂದು ನಿರ್ದೇಶಿಸಲಾಗಿದೆ. ಈ ನಿಯಮವನ್ನು ಶಬ್ದ ಮಾಲಿನ್ಯ ಆಕ್ಟ್ 1986 ರ ಅಡಿಯಲ್ಲಿ ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. 357 ದೇವಸ್ಥಾನ, 168 ಮಸೀದಿ, 95 ಚರ್ಚ್ ಹಾಗೂ 106 ಶಿಕ್ಷಣ ಸಂಸ್ಥೆಗಳು, 60 ಕೈಗಾರಿಕಾ ಸ್ಥಳಗಳು, 98 ಮನೋರಂಜನಾ ಸ್ಥಳಗಳು, 68 ಮದುವೆ ಹಾಲ್‌ಗಳು ಮತ್ತು ಕಾರ್ಯಕ್ರಮ ಸ್ಥಳಗಳು, 49 ಇತರ ಸಾರ್ವಜನಿಕ ಸ್ಥಳಗಳು ಸೇರಿದಂತೆ 1001 ಸ್ಥಳಗಳನ್ನು ಗುರುತಿಸಿ ಶಬ್ದ ಕಡಿಮೆ ಮಾಡುವಂತೆ ಸೂಚನೆ ನೀಡಲಾಗಿದೆ ಅಂದ್ರು.
Kshetra Samachara
06/04/2022 03:56 pm