ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹತ್ರಾಸ್ ಅತ್ಯಾಚಾರ ಘಟನೆ: ಎಬಿವಿಪಿಯಿಂದ ಪ್ರತಿಭಟನೆ, ಮನವಿ ಸಲ್ಲಿಕೆ

ಬಂಟ್ವಾಳ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಅತ್ಯಾಚಾರ ಪ್ರಕರಣ ಖಂಡಿಸಿ ಬಿ.ಸಿ ರೋಡಿನ ಮಿನಿ ವಿಧಾನಸೌಧ ಮುಂಭಾಗ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ಪ್ರತಿಭಟನೆ ನಡೆಯಿತು.

ಮನೀಷಾ ಅತ್ಯಾಚಾರ ನಡೆಸಿದವರಿಗೆ ಮರಣದಂಡನೆ ವಿಧಿಸಬೇಕು ಎಂದು ರಾಷ್ಟ್ರಪತಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ನಿವೃತ್ತ ಉಪನ್ಯಾಸಕ ಪ್ರೊ.ನಾರಾಯಣ ಭಂಡಾರಿ ಮಾತನಾಡಿ, ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಮರುಕಳಿಸಬಾರದೆಂದಿದ್ದರೆ ಕಠಿಣ ಕಾನೂನಿನ ಜಾರಿಯಾಗಬೇಕು ಎಂದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಅಖಿಲಾಷ್, ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಹ ಸಂಚಾಲಕರಾದ ದಿನೇಶ್ ಕೊಯಿಲ,ಸಿದ್ದಕಟ್ಟೆ ಘಟಕದ ಅದ್ಯಕ್ಷರಾದ ಗುರುಪ್ರಸಾದ್, ಚೇತನ್ ಒಕ್ಕೆತ್ತೂರು, ಆಕಾಶ್, ಮಹೇಶ್, ಹರ್ಷಿತ್ ಅರಳ, ನಿತಿನ್ ಸಿದ್ದಕಟ್ಟೆ, ತಿಲಕ್ ಶೆಟ್ಟಿ ಪೂಂಜ, ನಾಗರಾಜ್ ಶೆಣೈ, ಅನೀಶ್ ಚೇಳೂರು, ಸುಮಂತ್, ಲಿಖಿತ್ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

05/10/2020 05:42 pm

Cinque Terre

10.19 K

Cinque Terre

0

ಸಂಬಂಧಿತ ಸುದ್ದಿ