ಮಂಗಳೂರು: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಚಿತ್ರ ಹಿಂಸೆ, ಕೊಲೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದ.ಕ. ಜಿಲ್ಲಾ ಸಮಿತಿಯು ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿತು.
ಕಾನೂನಿನ ಕಣ್ಣಿಗೆ ಮಣ್ಣೆರಚಿ ಇಡೀ ಪ್ರಕರಣವನ್ನೇ ಮುಚ್ಚಿ ಹಾಕಲು ಪ್ರಯತ್ನಿಸಿರುವುದು ತೀರಾ ಅಮಾನವೀಯ. ಮಾತ್ರವಲ್ಲ, ಈ ಘಟನೆ ಖಂಡಿಸಲು ಮುಂದಾದ ವಿವಿಧ ಸಂಘಟನೆಗಳ ನಾಯಕರು, ರಾಜಕೀಯ ಪ್ರಮುಖರನ್ನು ಅರ್ಧ ದಾರಿಯಲ್ಲೇ ತಡೆ ಹಿಡಿದು ಬಂಧಿಸಿರುವುದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಂಥ ಕ್ರೂರಿ ಎಂಬುದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರೋಪಿಗಳನ್ನು ಗಲ್ಲಿಗೇರಿಸಬೇಕು ಹಾಗೂ ಸಂತ್ರಸ್ತ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಘೋಷಿಸಬೇಕು. ಅಲ್ಲದೆ, ಉ.ಪ್ರ. ಸರಕಾರವನ್ನು ತಕ್ಷಣವೇ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
Kshetra Samachara
07/10/2020 01:10 pm