ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ವಿಧಾನಸೌಧ ಚಲೋ ಬೆಂಬಲಿಸಿ ಪ್ರತಿಭಟನಾ ಪ್ರದರ್ಶನ

ಮಂಗಳೂರು: ರೈತ ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳ ವಾಪಸಾತಿ, ಕಾರ್ಮಿಕರ ಹಕ್ಕುಗಳ ಸಂರಕ್ಷಣೆ, ಕೋವಿಡ್ ಸಂಕಷ್ಟದ ಪರಿಹಾರ, 15 ಅಂಶಗಳ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ಕಾರ್ಮಿಕ ವರ್ಗ ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಕಾರ್ಯಕ್ರಮವನ್ನು ಬೆಂಬಲಿಸಿ, ಸಿಐಟಿಯು ನೇತೃತ್ವದಲ್ಲಿ ಇಂದು ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ, ಕೋವಿಡ್ ಸಂಕಷ್ಟದ ಕಾಲದಲ್ಲೂ ನರೇಂದ್ರ ಮೋದಿ ಸರ್ಕಾರವು ನವಉದಾರವಾದಿ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿಗೆ ತರುತ್ತಿದೆ ಎಮದು ಆರೋಪಿಸಿದರು.

ಕೃಷಿ, ಸಾರ್ವಜನಿಕ ಕ್ಷೇತ್ರ ಮತ್ತು ಸೇವೆಗಳನ್ನು ಕಾರ್ಪೋರೇಟ್ ಕಂಪೆನಿಗಳ ಲಾಭಕೋರತನಕ್ಕೆ ಬದಲಾಯಿಸಲಾಗುತ್ತಿದೆ. ಆದೇಶ, ಸುಗ್ರೀವಾಜ್ಞೆಗಳ ಮೂಲಕ ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸುವುದು, ಅಮಾನತುಗೊಳಿಸುವುದು ಹೆಚ್ಚುತ್ತಿದೆ.

ಜನತೆಯ ಹಕ್ಕುಗಳನ್ನು, ಪ್ರತಿಭಟಿಸುವುದನ್ನು ಹತ್ತಿಕ್ಕಲಾಗುತ್ತಿದೆ.ಜನಪರ ಹೋರಾಟಗಾರರ ಮೇಲಿನ ಕೇಸುಗಳು ಹಾಗೂ ಕಿರುಕುಳ ಹೆಚ್ಚುತ್ತಿದೆ. ಒಟ್ಟಿನಲ್ಲಿ ದೇಶ ಸರ್ವಾಧಿಕಾರಿ ನಡೆಯತ್ತ, ಫ್ಯಾಸಿಸ್ಟ್ ಮನೋಭಾವದತ್ತ ಸಾಗುತ್ತಿರುವುದು ಅತ್ಯಂತ ಅಪಾಯಕಾರಿಯಾಗಿದ್ದು, ದೇಶವನ್ನು ಉಳಿಸಲು ಕಾರ್ಮಿಕ ವರ್ಗ ಒಂದಾಗಿ ಹೋರಾಡಬೇಕಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ದ.ಕ. ಜಿಲ್ಲಾಧ್ಯಕ್ಷರಾದ ಕೃಷ್ಣಪ್ಪ ಸಾಲ್ಯಾನ್, ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಸಿಐಟಿಯು ಜಿಲ್ಲಾ ಮುಖಂಡರಾದ ಯು.ಬಿ.ಲೋಕಯ್ಯ, ಪದ್ಮಾವತಿ ಶೆಟ್ಟಿ, ಗಂಗಯ್ಯ ಅಮೀನ್, ಜಯಂತಿ ಶೆಟ್ಟಿ, ಬಾಬು ದೇವಾಡಿಗ, ಭಾರತಿ ಬೋಳಾರ, ಜಯಲಕ್ಷ್ಮೀ ರಾಘವ, ಕಟ್ಟಡ ಕಾರ್ಮಿಕರ ನಾಯಕರಾದ ದಿನೇಶ್ ಶೆಟ್ಟಿ, ಉಮೇಶ್ ಶಕ್ತಿನಗರ, ದಯಾನಂದ ಕೊಪ್ಪಲಕಾಡು ಮುಂತಾದವರು ಭಾಗವಹಿಸಿದ್ದರು.

Edited By :
Kshetra Samachara

Kshetra Samachara

24/09/2020 10:01 pm

Cinque Terre

7.21 K

Cinque Terre

0

ಸಂಬಂಧಿತ ಸುದ್ದಿ