ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದು ಸಂಜೆಯಿಂದಲೇ ಸೆಕ್ಷನ್ 144 ಜಾರಿ

ಮಂಗಳೂರು: ಚೀನಾ ಕೊರೊನಾ ಆತಂಕ ಕೊಂಚ ಕಡಿಮೆಯಾಗುತ್ತಿರುವಾಗಲೇ ಬ್ರಿಟನ್ ರೂಪಾಂತರ ಕೋವಿಡ್ ದೇಶದ ಜನರನ್ನು ಮತ್ತೆ ಆತಂಕಕ್ಕೆ ತಳ್ಳಿದೆ. ಹೀಗಾಗಿ ರಾಜ್ಯದಲ್ಲಿ ವಿವಿಧ ಕಡೆ ಹೊಸ ವರ್ಷದ ಸಂಭ್ರಮಾಚರಣೆ ಬ್ರೇಕ್ ಹಾಕಲಾಗಿದೆ. ಈ ಬಾರಿ ಮಂಗಳೂರಿನಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಡೆಸುವುದನ್ನು ನಿಷೇಧಿಸಲಾಗಿದೆ.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದು (ಡಿ.31)ರ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಅನ್ವಯವಾಗಲಿದ್ದು, ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಸಮಯದಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಸಾರ್ವಜನಿಕವಾಗಿ ಹೊಸ ವರ್ಷ ಆಚರಣೆ ಮಾಡುವಂತಿಲ್ಲ. ಹೋಟೆಲ್, ಪಬ್, ಕ್ಲಬ್ ಮಾಲ್ ಗಳಲ್ಲಿ ಹೊಸ ವರ್ಷಾಚರಣೆಗಾಗಿ ಯಾವುದೇ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ ಎಂದು ಆದೇಶಿಸಲಾಗಿದೆ.

Edited By : Vijay Kumar
Kshetra Samachara

Kshetra Samachara

31/12/2020 09:13 am

Cinque Terre

8.76 K

Cinque Terre

0

ಸಂಬಂಧಿತ ಸುದ್ದಿ