ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲೂ ಶುಕ್ರವಾರ ರಾತ್ರಿಯಿಂದೀಚೆಗೆ ನಿರಂತರವಾಗಿ ಮಳೆ ಸುರಿದ ಪರಿಣಾಮ, ಕೃಷಿ ಕಾರ್ಯಗಳಿಗೆ ತೊಡಕಾಗಿದೆ. ಕೆಲವೆಡೆ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮಲೆತಡ್ಕ ಎಂಬಲ್ಲಿ ಮಳೆಯಿಂದಾಗಿ ಮೊದಲೇ ಹದಗೆಟ್ಟಿದ್ದ ಸೇತುವೆಯ ಪಕ್ಕದ ಮಣ್ಣು ಕುಸಿದಿದ್ದು, ಸೇತುವೆಯೂ ಕುಸಿತದ ಭೀತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಪುಣಚದಿಂದ ಸಾರಡ್ಕ ಸಂಪರ್ಕಿಸುವ ಈ ರಸ್ತೆಯಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
Kshetra Samachara
19/09/2020 10:15 pm