ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರೀ ಮಳೆ ಸುರಿದಿದ್ದು, ಎಲ್ಲೆಡೆ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಧಿಕಾರಿ ಜಿಲ್ಲೆಯ ಎಲ್ಲಾ ಶಾಲಾ - ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಆದೇಶಿಸಿದ್ದಾರೆ.
ಇಂದು ಆರೆಂಜ್ ಅಲರ್ಟ್ ಇದ್ದು, ಅದು ನಾಳೆ ಬೆಳಗ್ಗೆ 8.30 ವರೆಗೆ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶುಕ್ರವಾರ ಜಿಲ್ಲೆಯ ಎಲ್ಲಾ ಶಾಲಾ - ಕಾಲೇಜುಗಳಿಗೆ ರಜೆ ನೀಡಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ಇಂದು ಕೂಡಾ ರಜೆ ಘೋಷಣೆಯಾಗಿತ್ತು. ಆದರೆ ಅಷ್ಟರಲ್ಲಾಗಲೇ ಶಾಲಾ - ಕಾಲೇಜುಗಳಿಗೆ ತೆರಳಿದ ವಿದ್ಯಾರ್ಥಿಗಳಿಗೆ ಎಂದಿನಂತೆ ಪಾಠ ನಡೆದಿತ್ತು. ಮಳೆಯ ಹಿನ್ನೆಲೆಯಲ್ಲಿ ಬರಲಾಗದ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿತ್ತು.
Kshetra Samachara
30/06/2022 06:25 pm