ಮಂಗಳೂರು: ಇತ್ತೀಚೆಗೆ ಸುರಿದ ಭಾರೀ ಗಾಳಿ ಮಳೆ ಹಾಗೂ ಪ್ರವಾಹದಿಂದಾಗಿ ಮೆಸ್ಕಾಂಗೆ 42.15 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ತಿಳಿಸಿದೆ.
ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಸೆ.18ರಿಂದ ಎಡೆಬಿಡದೆ ಮೂರು ದಿನಗಳ ಕಾಲ ಸುರಿ ಭಾರೀ ಗಾಳಿ ಮಳೆಗೆ 27 ಪರಿವರ್ತಕಗಳಿಗೆ ಹಾನಿಯಾಗಿದೆ.
ಒಟ್ಟು 221 ವಿದ್ಯುತ್ ಕಂಬಗಳಿಗೆ ಹಾನಿಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 26.69 ಲಕ್ಷ ರೂ. ಹಾನಿಯಾಗಿದ್ದರೆ, ಉಡುಪಿ ಜಿಲ್ಲೆಯಲ್ಲಿ 9.93 ಲಕ್ಷ ರೂ. ನಷ್ಟವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 3.60 ಲಕ್ಷ ರೂ. ಹಾನಿಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 1.93 ಲಕ್ಷ ರೂ. ಹಾನಿ ಸಂಭವಿಸಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.
Kshetra Samachara
24/09/2020 08:15 pm