ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ

ಕರಾವಳಿ ಭಾಗದಲ್ಲಿ ಜೂನ್ 1ರಿಂದ ಜುಲೈ 31ರ ವರೆಗೆ 61 ದಿನಗಳ ಕಾಲ ತಾತ್ಕಾಲಿಕವಾಗಿ ನಿಷೇಧಿಸಿ ಆದೇಶಿಸಲಾಗಿದೆ.

ಮೀನುಗಾರಿಕೆ ನಿಷೇಧದ ಹಿನ್ನೆಲೆಯಲ್ಲಿ ಬಲೆಗಳು, ಮೀನುಗಾರಿಕಾ ಸಾಧನಗಳು ಅಥವಾ ಯಾವುದೇ ಯಾಂತ್ರಿಕೃತ ದೋಣಿಗಳನ್ನು ಬಳಸಿ ಮೀನುಗಾರಿಕೆ ನಡೆಸುವುದನ್ನು ನಿಷೇಧಿಸಲಾಗಿದೆ. ಅಲ್ಲದೆ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ ಬೋರ್ಡ್ ಅಥವಾ ಔಟ್ ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳುವುದನ್ನು ನಿಷೇಧಿಸಲಾಗಿದೆ.

ಆದರೆ 10 ಅಶ್ವಶಕ್ತಿವರೆಗಿನ ಸಾಮರ್ಥ್ಯದ ಮೋಟಾರಿಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ ಅಥವಾ ನಾಡದೊಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳಲು ಅವಕಾಶವಿದೆ.

ಈ ಹಿನ್ನೆಲೆಯಲ್ಲಿ ಮೇಲ್ಕಂಡ ನಿಯಮಗಳನ್ನು ಉಲ್ಲಂಘಿಸಿದವರು ಕರ್ನಾಟಕ ಕಡಲ ಮೀನುಗಾರಿಕಾ ಕಾಯ್ದೆ 1986ರನ್ವಯ 1 ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By :
Kshetra Samachara

Kshetra Samachara

24/05/2022 01:21 pm

Cinque Terre

4.69 K

Cinque Terre

0

ಸಂಬಂಧಿತ ಸುದ್ದಿ