ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣವಾಗಿ ನೆಲಸಮಗೊಂಡ ಪರಿಣಾಮ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಮಂಗಳಪದವು ಸಮೀಪದ ಬನಾರಿ ಬಾಬುಕಟ್ಟೆ ಎಂಬಲ್ಲಿ ಸಂಭವಿಸಿದೆ.
ತರಕಾರಿ ವ್ಯಾಪಾರ ನಡೆಸುತ್ತಿರುವ ಅಬ್ದುಲ್ಲ ಎಂಬವರ ಮನೆಯ ಪಕ್ಕದ ಧರೆ ಜೋರಾದ ಮಳೆಗೆ ಕುಸಿದು ಮನೆ ಮೇಲೆ ಉರುಳಿ ಬಿದ್ದಿದೆ. ಇದರಿಂದ ಮನೆ ಸಂಪೂರ್ಣವಾಗಿ ನೆಲಸಮವಾಗಿದೆ.
ಘಟನೆಯಲ್ಲಿ ಕುಟುಂಬದ ಆರು ಮಂದಿ ಮನೆಯ ಅವಶೇಷದಡಿ ಸಿಕ್ಕಿ ಹಾಕಿಕೊಂಡಿದ್ದರು. ತಕ್ಷಣವೇ ಕಾರ್ಯ ಪ್ರವೃತ್ತರಾದ ಸ್ಥಳೀಯರು ಆರು ಮಂದಿಯನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಮನೆ ಯಜಮಾನ ಅಬ್ದುಲ್ಲ, ಪತ್ನಿ ಜೋಹಾರ, ಮಕ್ಕಳಾದ ಅರಫಾಝ್, ಇರ್ಪಾನ್, ತಸ್ಲೀಮಾ, ಮಿಶ್ರಿಯಾ ಗಾಯಗೊಂಡಿದ್ದು, ವಿಟ್ಲ ಹಾಗೂ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ.
Kshetra Samachara
20/09/2020 09:43 am