ಮಂಗಳೂರು: ಜಿಲ್ಲೆಯಲ್ಲಿ ಹಕ್ಕಿ ಜ್ವರದ ಆತಂಕ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಮಂಗಳೂರು ಹೊರವಲಯದ ವಾಮಂಜೂರಿನ ಪಚ್ಚನಾಡಿ ಸಮೀಪ ಮೂರು ಕಾಗೆಗಳು ಸತ್ತು ಬಿದ್ದಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ಪಚ್ಚನಾಡಿ ಡಂಪಿಂಗ್ ಯಾರ್ಡ್ ಸಮೀಪ ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ಮೂರು ಕಾಗೆಗಳು ಸತ್ತು ಬಿದ್ದಿರುವುದು ಸೋಮವಾರ ಬೆಳಿಗ್ಗೆ ಕಂಡುಬಂದಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಗೆಗಳ ದೇಹದ ಮಾದರಿಯನ್ನು ಸಂಗ್ರಹಿಸಿದ್ದಾರೆ.
Kshetra Samachara
11/01/2021 11:30 am