ಮುಲ್ಕಿ: ಮುಲ್ಕಿ ಸಮೀಪದ ಕೊಲ್ನಾಡು ವಿನಲ್ಲಿ ರಾಜ್ಯಮಟ್ಟದ ಮಾ 11, 12, 13ರಲ್ಲಿ ನಡೆಯುವ ರಾಜ್ಯಮಟ್ಟದ ಬೃಹತ್ ಕೃಷಿ ಮೇಳದ 2022 ಅಂಗವಾಗಿ ಬೆಳ್ಳಾಯರು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ಅರ್ಚಕ ಗಣೇಶ್ ಭಟ್ ನೇತೃತ್ವದಲ್ಲಿ ಕೊಲ್ನಾಡು ನಲ್ಲಿ ಚಪ್ಪರ ಮುಹೂರ್ತ ನಡೆಯಿತು.
ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಮಾತನಾಡಿ ರಾಜ್ಯಮಟ್ಟದ ಕೃಷಿ ಮೇಳದ ಮೂಲಕ ಕೃಷಿಗೆ ಪ್ರೋತ್ಸಾಹ ನೀಡುತ್ತಿರುವ ಯುವಜನಾಂಗದ ಕಾರ್ಯ ಶ್ಲಾಘನೀಯ ಎಂದರು.
ರಾಜ್ಯ ಸರಕಾರದ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು,ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ, ಸಮಿತಿ ಅಧ್ಯಕ್ಷ ವಿಜಯ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಬೃಹತ್ ಕೃಷಿಮೇಳದ ಕೃಷಿಸಿರಿ 2022 ಪೂರ್ವಭಾವಿ ಸರಣಿ ಕಾರ್ಯಕ್ರಮದಲ್ಲಿ ಫೆ.27ರಂದು ಲಗೋರಿ ಹಗ್ಗಜಗ್ಗಾಟ ಸಾಂಪ್ರದಾಯಿಕ ಕ್ರೀಡೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.
ಸಮಿತಿಯ ಡಾ. ಅಣ್ಣಯ್ಯ ಕುಲಾಲ್ ನಿರೂಪಿಸಿದರು.
Kshetra Samachara
18/02/2022 04:50 pm