ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಏಳಿಂಜೆ: ಗಿಡ ಬೆಳೆಸಿ ಪರಿಸರ ಉಳಿಸಿ ಅಭಿಯಾನಕ್ಕೆ ಚಾಲನೆ

ಮುಲ್ಕಿ: ಕಿನ್ನಿಗೋಳಿ ಸಮೀಪದ ಏಳಿಂಜೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ಬೆಳೆಸಿ ಪರಿಸರ ಉಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಏಳಿಂಜೆ ಒಕ್ಕೂಟದ ಅಧ್ಯಕ್ಷೆ ಪದ್ಮಿನಿ ಮಾತನಾಡಿ ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಹಸಿರನ್ನು ಉಳಿಸಲು ಪಣತೊಡೋಣ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಜೂಲಿಯಾನ ಡಿಸೋಜ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಿನ್ನಿಗೋಳಿ ವಲಯದ ಮೇಲ್ವಿಚಾರಕ ನವೀನ್, ಸೇವಾ ಪ್ರತಿನಿಧಿ ಸುಮಾ, ಲೀಲಾ ಪ್ರಸನ್ನ, ಶಿಕ್ಷಕಿಯರಾದ ಸುರೇಖಾ, ಚಂದ್ರಕಲಾ ಶಾಲಾ ಮಕ್ಕಳು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/07/2022 09:32 pm

Cinque Terre

2.99 K

Cinque Terre

0

ಸಂಬಂಧಿತ ಸುದ್ದಿ