ಬೆಳ್ತಂಗಡಿ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಖಂಡಿಸಿ ಹಾಗೂ ಸಂತ್ರಸ್ತೆಯ ಮನೆಗೆ ಭೇಟಿ ನೀಡುವ ವೇಳೆ ಬಂಧನಕ್ಕೊಳಗಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಕೋಶಾಧಿಕಾರಿಯ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಜಿಲ್ಲಾ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನಸೌಧ ಬಳಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಕ್ಯಾಂಪಸ್ ಫ್ರಂಟ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಮಾತನಾಡಿದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ನಾಯಕರನ್ನು ತಕ್ಷಣ ಬಿಡುಗಡೆ ಗೊಳಿಸಬೇಕೆಂದು ಪ್ರತಿಭಟನಾಕಾರರು ಇದೇ ವೇಳೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಬೆಳ್ತಂಗಡಿ ಜಿಲ್ಲಾಧ್ಯಕ್ಷ ಸಫ್ವಾನ್ ಸುನ್ನತ್ ಕೆರೆ, ಸದಸ್ಯ ಇಮ್ರಾನ್ ಪಾಂಡವರಕಲ್ಲು, ಹರ್ಷದ್ ಸುನ್ನತ್ ಕೆರೆ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kshetra Samachara
08/10/2020 11:30 am