ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೀನಿನ ಉತ್ಪನಕ್ಕೆ ಹೆಚ್ಚಿನ ಆದ್ಯತೆ ನೀಡಿ : ಸಚಿವ ಕೋಟ

ಮಂಗಳೂರು: ಕಡಲ ಮಕ್ಕಳು ಮೀನು ವ್ಯಾಪಾರ ಮಾಡುವ ಸಾಮರ್ಥ್ಯವುಳ್ಳ ಸಮರ್ಥ ಮೀನಿನ ಉತ್ಪನ್ನಗಳ ವಿತರಕರನ್ನು ಆಯ್ಕೆ ಮಾಡಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಮಂಗಳವಾರ ನಡೆದ ಮೀನಿನ ಚಿಫ್ಸ್ ಉತ್ಪಾದನೆಯ ವಿತರಕರ ಸಭೆಯಲ್ಲಿ ಮಾತನಾಡಿದರು.

ಮೀನುಗಾರಿಕೆ ಉದ್ಯಮದಲ್ಲಿ ತೊಡಗಿಸಿಕೊಳ್ಳುವ ಸಣ್ಣ ಉದ್ದಿಮೆದಾರರು ಮೀನಿನ ಉತ್ಪನ್ನ ಪೂರೈಕೆ ಹಾಗೂ ವಿತರಣೆಗೆ ಹೆಚ್ಚು ಒತ್ತು ನೀಡಬೇಕು ಎಂದರು.

ಈ ವೇಳೆ ಮತ್ಸ್ಯದರ್ಶಿನಿ ಮಳಿಗೆಗಳಿಗೆ ಮೀನು ಹಾಗೂ ಮೀನಿನ ಉತ್ಪನ್ನಗಳನ್ನು ಸರಬರಾಜು ಮಾಡುವುದರ ಬಗ್ಗೆ ಮತ್ಸ್ಯಬಂಧನ ಪ್ರೈವೆಟ್ ಲಿಮಿಟೆಡ್ ಜೊತೆ ಒಡಂಬಡಿಕೆ ಮಾಡಿಕೊಂಡು ಪ್ರತಿಯನ್ನು ಹಸ್ತಾಂತರಿಸಲಾಯಿತು.

ಜೊತೆಗೆ ಮೀನುಗಾರರ ಚಲವಲನ ದಾಖಲಿಸುವ ಮೊಬೈಲ್ ಆ್ಯಪ್ನ್ನು ಸಚಿವರು ಬಿಡುಗಡೆಗೊಳಿಸಿದರು.

ಕರ್ನಾಟಕ ರಾಜ್ಯ ಮೀನುಗಾರಿಕೆ ಸಹಕಾರಿ ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕ ಎಂ.ಎಲ್. ದೊಡ್ಡಮನಿ, ಕರ್ನಾಟಕ ರಾಜ್ಯ ಮೀನುಗಾರಿಕೆ ಸಹಕಾರಿ ಮಹಾಮಂಡಳಿಯ ಜನರಲ್ ಮ್ಯಾನೇಜರ್ ಪಿ.ಎಂ.ಮುದ್ದಣ್ಣ, ಮೀನುಗಾರಿಕಾ ಉಪನಿರ್ದೇಶಕ ಪಾಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

08/10/2020 03:57 pm

Cinque Terre

19.6 K

Cinque Terre

0

ಸಂಬಂಧಿತ ಸುದ್ದಿ