ಕುಶಾಲನಗರ: ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆಸ್ಪತ್ರೆಯ ಆ್ಯಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.
ಕಾರ್ಮಿಕ ಮಡ್ಲೇಟಪ್ಪಎಂಬವರ ಪತ್ನಿ ವೇಲೂರಮ್ಮ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದಾಕೆ.
ವೇಲೂರಮ್ಮ ಕುಶಾಲನಗರದ ಗುಂಡುರಾವ್ ಬಡಾವಣೆಯಲ್ಲಿರುವ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದರು.
ಆದರೆ, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಗೆ 108 ಮೂಲಕ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಆನೆಕಾಡು ಎಂಬಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರು ಅಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಆ್ಯಂಬುಲೆನ್ಸ್‌ನಲ್ಲಿದ್ದ ಸಿಬ್ಬಂದಿ ಎಂ.ಟಿ. ಮಮತಾ ಮತ್ತು ಚಾಲಕ ಅರುಣ್ ಈ ಸಂದರ್ಭ ತಾಯಿ ಮತ್ತು ಮಗುವಿನ ಪ್ರಥಮ ಚಿಕಿತ್ಸೆಯೊಂದಿಗೆ ಮಡಿಕೇರಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಸದ್ಯ ತಾಯಿ- ಮಗು ಆರೋಗ್ಯದಿಂದ ಇದ್ದಾರೆ ಎಂದು ವೇಲೂರಮ್ಮ ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
Kshetra Samachara
09/10/2020 09:08 pm