ಬಂಟ್ವಾಳ: ಮಹಾದೇವ ವಿವಿಧೋದ್ದೇಶ ಸಹಕಾರಿ ಸಂಘ ನಿ. ಕುಕ್ಕಾಜೆ ಮಂಚಿ ಅಧ್ಯಕ್ಷ, ಇರಾ ಗ್ರಾಮ ಪಂಚಾಯತ್ ದರ್ಬೆ ನಿವಾಸಿ ದೇವದಾಸ ಅಡಪ (50) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಅ.9ರಂದು ನಿಧನರಾದರು.
ಸಹಕಾರಿ, ಧಾರ್ಮಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಸರಳ ಸಜ್ಜನಿಕೆಯ ವ್ಯಕ್ತಿಯಾಗಿ ಗುರುತಿಸಿ ಕೊಂಡಿದ್ದ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ಇನ್ನೂ ಇವರ ಸಾವಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆರು ಮೇಳಗಳ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಕಲ್ಲಾಡಿ, ಬಂಟ್ವಾಳ ತಾ.ಪಂ. ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಇರಾ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಲಯನ್ಸ್ ಮಾಜಿ ಅಧ್ಯಕ್ಷ ಡಾ. ಗೋಪಾಲಚಾರ್ಯ ಮಂಚಿ ಮತ್ತಿತರ ಗಣ್ಯರು ಸಂತಾಪ ಸಲ್ಲಿಸಿದ್ದಾರೆ.
Kshetra Samachara
10/10/2020 05:39 pm