ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಯನ್ಸ್ ಸೇವಾ ಮಂದಿರದಲ್ಲಿ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ : ಲಯನ್ಸ್ ಕ್ಲಬ್ ಬಂಟ್ವಾಳ ಇದರ ವತಿಯಿಂದ ಯೆನಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ ಬೃಹತ್ ಉಚಿತ ಆಯುರ್ವೇದಿಕ್ ವೈದ್ಯರಿಂದ ಆರೋಗ್ಯ ತಪಾಸಣಾ ಶಿಬಿರ ಬಿ.ಸಿ.ರೋಡಿನ ಲಯನ್ಸ್ ಸೇವಾಮಂದಿರದಲ್ಲಿ ಶನಿವಾರ ನಡೆಯಿತು.

ಲಯನ್ಸ್ ಜಿಲ್ಲಾ ರಾಜ್ಯಪಾಲ ಡಾ. ಗೀತ್ಪ್ರಕಾಶ್ ಶಿಬಿರವನ್ನು ಉದ್ಘಾಟಿಸಿದರು. ಬಂಟ್ವಾಳ ಲಯನ್ಸ್ ಕ್ಲಬ್ ನ ಅಧ್ಯಕ್ಷ ಕೃಷ್ಣಶ್ಯಾಮ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಲಯನ್ಸ್ ಪ್ರಥಮ ಜಿಲ್ಲಾ ಉಪ ರಾಜ್ಯಪಾಲ ವಸಂತ ಕುಮಾರ್ ಶೆಟ್ಟಿ, ಯೇನಪೋಯ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಿನ್ಸಿಪಾಲ್ ಡಾ. ಗುರುರಾಜ್ ಎಚ್. ಶಿಬಿರ ಸಂಯೋಜಕ ಲಕ್ಷ್ಮಣ್ ಕುಲಾಲ್ ಅಗ್ರಬೈಲು, ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಪ್ರಾಂತ್ಯ ಅಧ್ಯಕ್ಷ ಸಂಜೀವ ಶೆಟ್ಟಿ, ಕಾರ್ಯದರ್ಶಿ ಕೆ. ವೈಕುಂಠ ಕುಡ್ವ, ಕೋಶಾಧಿಕಾರಿ ದಿಶಾ ಆಶೀರ್ವಾದ್, ಎನಪೋಯ ಆಸ್ಪತ್ರೆಯ ಶಿಬಿರ ಸಂಚಾಲಕ ರಝಾಕ್ ಮೊದಲಾದವರು ಭಾಗವಹಿಸಿದ್ದರು. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಂಡರು.

Edited By : Nirmala Aralikatti
Kshetra Samachara

Kshetra Samachara

10/10/2020 06:12 pm

Cinque Terre

3.14 K

Cinque Terre

0

ಸಂಬಂಧಿತ ಸುದ್ದಿ