ಮುಲ್ಕಿ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ ಮುಚ್ಚೂರು ಪಂಚಾಯತ್ ವ್ಯಾಪ್ತಿಯಲ್ಲಿ ಶನಿವಾರ ನಡೆಯಿತು.
ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಮುಚ್ಚೂರು ಭಾಗದಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ
ನೀಡಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ವಿಶೇಷ ಭಾಷಣ ಮಾಡಿ, ಪಕ್ಷ ಸಂಘಟನೆ ಬಗ್ಗೆ ಮುಂದೆ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು.
ಜಿಪಂ ಸದಸ್ಯರಾದ ಜನಾರ್ದನ ಗೌಡ, ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಸಾದ್ ಕುಮಾರ್, ಕಾರ್ಯದರ್ಶಿ ಅನಿಲ್ ಕುಮಾರ್ , ಎಡಪದವು ಮಹಾಶಕ್ತಿ ಕೇಂದ್ರದ ಪ್ರಭಾರಿ ಅಮರೇಶ್ ಬೇಕಲ್, ಪ್ರಕಾಶ್ ಹೆಗ್ಡೆ ಶಕ್ತಿ ಕೇಂದ್ರ ಪ್ರಮುಖ್, ಗ್ರಾಪಂ ಮಾಜಿ ಅಧ್ಯಕ್ಷ ವೀರಪ್ಪ ಗೌಡ,ಅಶೋಕ್ ನಾಯ್ಕ ಎಸ್.ಟಿ.ಮೋರ್ಚಾ ಮಂಡಲ ಅಧ್ಯಕ್ಷರು, ಹಿರಿಯ ಮುಖಂಡರು, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು
Kshetra Samachara
10/10/2020 10:36 pm