ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

"ಯೋಗಿ ಆದಿತ್ಯನಾಥ್ ಗೆ ನಿಂದಿಸಿದ ಮಿಥುನ್ ರೈ ವಿರುದ್ಧ ದೂರು ದಾಖಲಿಸಿ"

ಸುಳ್ಯ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಗ್ಗೆ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡಲು ಪ್ರೇರೇಪಿಸಿದ್ದಾರೆ ಈ ಬಗ್ಗೆ ದೂರು ದಾಖಲಿಸುವಂತೆ ಕಡಬ ಪೊಲೀಸ್ ಠಾಣೆಗೆ ಮನವಿ ಮಾಡಲಾಗಿದೆ.

ಮಿಥುನ್ ರೈ ವಿರುದ್ಧ ಇಂದು ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಡಬ ಠಾಣೆಯಲ್ಲಿ ಕೂಡಲೇ ಪ್ರಕರಣ ದಾಖಲಿಸುವಂತೆ ಮನವಿ ನೀಡಲಾಯಿತು.

ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾರ್ಯದರ್ಶಿ ಚೇತನ್ ನಾವೂರು, ಸದಸ್ಯರಾದ ಕೀರ್ತನ್ ಸೂಡ್ಲು, ಪ್ರವೀಣ, ಸುರೇಶ, ಶರತ್ ಮುಂತಾದವರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

13/10/2020 05:32 pm

Cinque Terre

3.46 K

Cinque Terre

0

ಸಂಬಂಧಿತ ಸುದ್ದಿ