ಬಂಟ್ವಾಳ: ಪಂಚಾಯತ್ ರಾಜ್ ವ್ಯವಸ್ಥೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕಳ್ಳಿಗೆ ಗ್ರಾ ಪಂ ಕಚೇರಿ ಮುಂಭಾಗದಲ್ಲಿ ಬಿಜೆಪಿ ಸರಕಾರ, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ರೈ ಯವರ ನೇತೃತ್ವದಲ್ಲಿ ಮಂಗಳವಾರ ಏಕಕಾಲದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ 38 ಗ್ರಾಪಂ ಕಚೇರಿ ಮುಂಭಾಗ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತ್ತು.
ಈ ಸಂದರ್ಭ ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ತಾಪಂ ಸದಸ್ಯರಾದ ಶಿವಪ್ರಸಾದ್ ಕನಪಾಡಿ, ವಲಯ ಅಧ್ಯಕ್ಷರಾದ ದಿವಾಕರ ಪಂಬದಬೆಟ್ಟು, ಮಧುಸೂದನ್ ಶೆಣೈ, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
13/10/2020 05:40 pm