ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಪುತ್ರ ಸುಹಾಸ್ ನಿಧನ

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಅವರ ಪುತ್ರ ಸುಹಾಸ್ (31) ಹೃದಯಾಘಾತದಿಂದ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಇಲ್ಲಿನ ಶರಾವತಿ ನಗರದ ಸ್ವಗೃಹದಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

2013ರಲ್ಲಿ ನಡೆದ ಅಪಘಾತವೊಂದರಲ್ಲಿ ಸುಹಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದವು. ಹಲವು ಸಲ ಇವರು ಆಪರೇಷನ್‌ಗಳಿಗೆ ಒಳಗಾಗಿದ್ದರು.

ಇವರಿಗೆ ಮೂರು ವರ್ಷದ ಹಿಂದಷ್ಟೇ ಮದುವೆಯಾಗಿತ್ತು.

Edited By : Nirmala Aralikatti
Kshetra Samachara

Kshetra Samachara

18/10/2020 09:20 pm

Cinque Terre

14.43 K

Cinque Terre

0

ಸಂಬಂಧಿತ ಸುದ್ದಿ