ಮಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಸ್ಥಗಿತ ಗೊಳಿಸಲಾಗಿದ್ದ ಏರ್ ಇಂಡಿಯಾ ವಿಮಾನಗಳ ಮಂಗಳೂರು- ಬೆಂಗಳೂರು ಸೇವೆ ಅಕ್ಟೋಬರ್ 26ರಿಂದ ಪುನಾರಂಭಗೊಳ್ಳಲಿದೆ ಎಂದು ಏರ್ ಇಂಡಿಯಾ ತಿಳಿಸಿದೆ.
ಎಐ 575 ಬೆಂಗಳೂರು ವಿಮಾನ ನಿಲ್ದಾಣದಿಂದ 5:20ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ. ಬಳಿಕ ಸಂಜೆ 6 ಗಂಟೆಗೆ ಮಂಗಳೂರಿನಿಂದ ಹೊರಟು ಸಂಜೆ 7:20ಕ್ಕೆ ಬೆಂಗಳೂರು ತಲುಪಲಿದೆ.
ವಿಮಾನಗಳು ಹಾರಾಟ ವಾರದಲ್ಲಿ ಮೂರು ದಿನಗಳು ಮಾತ್ರ ಇರಲಿದ್ದು, ಸೋಮವಾರ, ಬುಧವಾರ ಮತ್ತು ಶುಕ್ರವಾರ ಪ್ರಯಾಣಿಕರಿಗೆ ಲಭ್ಯವಿರಲಿದೆ.
ಪ್ರಯಾಣ ದರವು 2,342 ರೂ.ನಿಂದ ಆರಂಭವಾಗಲಿದೆ ಎಂದು ಏರ್ ಇಂಡಿಯಾ ಸಂಸ್ಥೆ ಮಾಹಿತಿ ನೀಡಿದೆ.
Kshetra Samachara
24/10/2020 10:37 pm