ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಲ್ಲ ಸಮಸ್ಯೆಗಳಿಗೂ ಹಲ್ಲೆ, ಕೊಲೆ ಪರಿಹಾರವಲ್ಲ: ವಜ್ರದೇಹಿ ಶ್ರೀ

ಮಂಗಳೂರು: ಎಲ್ಲ ಸಮಸ್ಯೆಗಳಿಗೂ ಹಲ್ಲೆ, ಕೊಲೆ ಪರಿಹಾರವಲ್ಲ ಎಂದು ಹಿಂದೂ ಜಾಗರಣ ವೇದಿಕೆ ಗೌರವಾಧ್ಯಕ್ಷ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದಾರೆ.

ಬುಧವಾರ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈಯಕ್ತಿಕ ಕಾರಣಗಳಿಗಾಗಿ ಹೊಡೆದಾಡಿಕೊಂಡು ಯುವಕರು ಕೊಲೆಯಾಗುತ್ತಿದ್ದಾರೆ. ತಮ್ಮೊಳಗಿನ ವೈಮನಸ್ಸು ಬದಿಗಿಟ್ಟು, ಸಮಾಜದ ಉಳಿವಿಗಾಗಿ ಒಂದಾಗಬೇಕೆಂದು ಅವರು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್‌ನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಕೃಷ್ಣಮೂರ್ತಿ, ಜಿಲ್ಲಾಧ್ಯಕ್ಷ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಬಜರಂಗದಳ ವಿಭಾಗ ಸಂಯೋಜಕ ಭುಜಂಗ ಕುಲಾಲ್ ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

28/10/2020 11:22 pm

Cinque Terre

3.65 K

Cinque Terre

0

ಸಂಬಂಧಿತ ಸುದ್ದಿ