ಮಂಗಳೂರು: ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಯಾವುದೇ ಕೆಲಸಗಳಿಗೆ ಅಧಿಕಾರಿಗಳು, ಸಿಬ್ಬಂದಿ, ಹಣ ಕೇಳಿದರೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮನವಿ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಡೆದ ಜಾಗೃತಿ ಅರಿವು ಸಪ್ತಾಹ-2020ನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಕಾನೂನಾತ್ಮಕ ಮತ್ತು ಆಡಳಿತಾತ್ಮಕ ನೆರವು ನೀಡುವ ಮಾಹಿತಿ ಅಳವಡಿಸಬೇಕು. ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಹಣದ ಅಪೇಕ್ಷೆ ಇಟ್ಟರೆ ಅಥವಾ ಸಮಸ್ಯೆ ಎದುರಾದರೆ ಈ ಮಾಹಿತಿ ಕೈಪಿಡಿಯ ಸದುಪಯೋಗ ಪಡೆದುಕೊಳ್ಳಬಹುದು ಎಂದರು.
ಈ ಸಂದರ್ಭ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶಿಲ್ಪಾ ಎ.ಜಿ., ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಐಎಎಸ್ ಪ್ರೊಬೆಷನರಿ ಅಧಿಕಾರಿ ಮೋನಾ ರೋತ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
28/10/2020 11:24 pm