ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಘನತ್ಯಾಜ್ಯ ಸಂತ್ರಸ್ತರಿಗೆ ಕಾನೂನು ನೆರವು ಕಾರ್ಯಕ್ರಮ

ಮಂಗಳೂರು: ಘನ ತ್ಯಾಜ್ಯ ಭೂ ಭರ್ತಿಯಿಂದ ನಷ್ಟಗೊಂಡ ಸಂತ್ರಸ್ತರಿಗೆ ಕಾನೂನು ನೆರವು ಒದಗಿಸುವ ಕಾರ್ಯಕ್ರಮ ವಾಮಂಜೂರು ಸಮೀಪದ ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಮತ್ತು ಸತ್ರ ಪ್ರಧಾನ ನ್ಯಾಯಾಧೀಶ ಮುರಳೀಧರ್ ವೈ.ಬಿ., ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ, ಕುಡುಪು ಹಾಗೂ ಮಂದಾರ ಪ್ರದೇಶದ ಸಂತ್ರಸ್ತರು ಯಾವುದೇ ಮಧ್ಯವರ್ತಿಗಳ ಬಳಿಗೆ ತೆರಳದೆ ಪಾಲಿಕೆಗೆ ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನೇರವಾಗಿ ಅರ್ಜಿ ಸಲ್ಲಿಸಬೇಕು. ಈ ವೇಳೆ ನಷ್ಟಕ್ಕೆ ಸಂಬಂಧಿಸಿ ದಾಖಲೆಗಳನ್ನೂ ಅರ್ಜಿಯೊಂದಿಗೆ ಲಗತ್ತಿಸಬೇಕೆಂದರು.

ಮಹಾನಗರ ಪಾಲಿಕೆ ಜಂಟಿ ಆಯುಕ್ತ ಸಂತೋಷ್ ಕುಮಾರ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾರ್ಯದರ್ಶಿ ಎ.ಜಿ. ಶಿಲ್ಪಾ, ಕಾರ್ಪೊರೇಟರ್ ಸಂಗೀತಾ, ಪಾಲಿಕೆ ಆರೋಗ್ಯಾಧಿಕಾರಿ ಮಂಜಯ್ಯ ಶೆಟ್ಟಿ, ನ್ಯಾಯವಾದಿ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

04/11/2020 10:53 pm

Cinque Terre

4.1 K

Cinque Terre

0

ಸಂಬಂಧಿತ ಸುದ್ದಿ