ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪ್ಪಣ್ಣನ ಕಟ್ಟೆಯೊಂದಿಗೆ ಭಾವನಾತ್ಮಕ ನಂಟು ಬೆಸೆದುಕೊಂಡಿರುವ ಬಾವಿ: ಇಂದಿಗೂ ದುಸ್ಥಿತಿ

ಮಹಾನಗರ:ಜಗತ್ತು ನಿಜಕ್ಕೂ ವಿಸ್ಮಯಕಾರಿ ವಸ್ತು ಸ್ಥಿತಿಯಾಗಿದ್ದು,ನಿದರ್ಶನ ಎಂಬಂತೆ ಇಲ್ಲೊಂದು ಐತಿಹಾಸಿಕ ಸಂಗತಿ ನಡೆದಿದೆ.

ಹೌದು..ಮಂಗಳೂರು ನಗರದ ಹೃದಯ ಭಾಗ ಹಂಪನಕಟ್ಟೆಯಲ್ಲಿ ಸುಮಾರು ಒಂದು ಶತಮಾನಕ್ಕೂ ಹಿಂದಿನ ಇತಿಹಾಸವಿರುವ ಬೃಹತ್‌ ಬಾವಿಯೊಂದು ಪತ್ತೆಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ವಿಶೇಷ ಅಂದರೆ ಈ ಬಾವಿಯು ಈಗಲೂ ಸುಸ್ಥಿತಿಯಲ್ಲಿದೆ.

ಈ ಬಾವಿಯ ಮತ್ತೂಂದು ವಿಶೇಷ ಅಂದರೆ ಅದು ಸಾಮಾನ್ಯವಾಗಿ ಯಾರು ಊಹಿಸಲು ಸಾಧ್ಯವಾಗದಷ್ಟು ಆಳವನ್ನು ಹೊಂದಿದೆ. ಸ್ಥಳೀಯ ನಿವಾಸಿ ಗಳ ಪ್ರಕಾರ, ಈ ಬಾವಿಯು ಸುಮಾರು 100 ಅಡಿ ಆಳವನ್ನು ಹೊಂದಿದೆ ಎನ್ನಲಾಗುತ್ತಿದೆ.

ಹಂಪನಕಟ್ಟೆಯ ಸಿಗ್ನಲ್‌ ಬಳಿಯಿರುವ ರಿಕ್ಷಾ ಪಾರ್ಕಿಂಗ್‌ ಹತ್ತಿರದಲ್ಲಿ ಹಳೆ ಕಾಲದ ಈ ಬಾವಿ ಪತ್ತೆಯಾಗಿದೆ. ಇಲ್ಲಿ ಕೆಲವು ದಿನಗಳಿಂದ ಸ್ಮಾರ್ಟ್‌ಸಿಟಿ ಯೋಜನೆಯಡಿ ಜಂಕ್ಷನ್‌ ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ರಸ್ತೆ ಅಗೆಯುವ ಕಾಮಗಾರಿ ನಡೆಯು ತ್ತಿತ್ತು.

ಈ ವೇಳೆ ಕಾಂಕ್ರೀಟ್‌ ಸ್ಲಾಬ್‌ ಕಾಣಿಸಿತ್ತು. ಆಗ ಸ್ಲಾಬ್‌ ಮೇಲೆತ್ತಿ ನೋಡಿದಾಗ ಆಳವಾದ ಬಾವಿ ಇರುವುದು ಗೊತ್ತಾಗಿದೆ. ಈ ವಿಚಾರವನ್ನು ಅಲ್ಲಿ ನೆಲೆಸಿರುವ ಜನರೊಂದಿಗೆ ಚರ್ಚಿಸಿದಾಗ ಶತಮಾನದಷ್ಟು ಹಳೆಯ ಬಾವಿ ಇದು ಎನ್ನುವುದು ಖಚಿತಗೊಂಡಿದೆ.

ಅಂದಹಾಗೆ, ಈ ಬಾವಿಗೂ ಹಂಪನಕಟ್ಟೆ ಪ್ರದೇಶಕ್ಕೂ ಭಾವನಾತ್ಮಕ ಸಂಬಂಧವಿದೆ. ಶತಮಾನದ ಹಿಂದೆ ಮಂಗಳೂರಿಗೆ ದೂರದಿಂದ ಬಂದವರಿಗೆ ಬಾಯಾರಿಕೆಗಾಗಿ ಸ್ಥಳೀಯರಾದ ಅಪ್ಪಣ್ಣ ಅವರು ಈಗಿನ ಹಂಪನಕಟ್ಟೆಯ ಅಶ್ವತ್ಥ ಮರದ ಕಟ್ಟೆಯ ಮೇಲೆ ಕುಳಿತು ನೀರು ಕೊಡುತ್ತಿದ್ದರು ಎನ್ನುವ ಪ್ರತೀತಿ ಇದೆ.

ಆ ಕಾಲದಲ್ಲಿ ಅಪ್ಪಣ್ಣ ಅವರು ಇದೇ ಬಾವಿಯಿಂದ ನೀರು ತೆಗೆದುಕೊಂಡು ಬಂದು ನೀಡುತ್ತಿದ್ದರು ಎನ್ನಲಾಗುತ್ತಿದೆ. ಈ ರೀತಿ ಹಿಂದೆ “ಅಪ್ಪಣ್ಣ ಕಟ್ಟೆ’ಯಾಗಿದ್ದ ಆ ಪ್ರದೇಶ ಅನಂತರದಲ್ಲಿ “ಹಂಪನಕಟ್ಟೆ’ಯಾಗಿ ಹೆಸರು ಪಡೆದುಕೊಂಡಿದೆ.

ಹೀಗಿರುವಾಗ ಆ ಕಾಲದಲ್ಲಿ ಈ ಬಾವಿ ಕೂಡ “ಅಪ್ಪಣ್ಣನ ಬಾವಿ’ ಎಂದೇ ಪ್ರಸಿದ್ಧಿ ಪಡೆದಿತ್ತು ಎನ್ನುತ್ತಾರೆ ಸ್ಥಳೀಯ ನಿವಾಸಿಗಳು.

Edited By : Nirmala Aralikatti
Kshetra Samachara

Kshetra Samachara

18/09/2020 08:02 pm

Cinque Terre

7.93 K

Cinque Terre

0

ಸಂಬಂಧಿತ ಸುದ್ದಿ