ಬಂಟ್ವಾಳ: ಗೋಳ್ತಮಜಲು ಬಿಜೆಪಿ ಮಹಾ ಶಕ್ತಿಕೇಂದ್ರದ ಪ್ರಮುಖರ ಸಭೆ ಅಧ್ಯಕ್ಷ, ಕ್ಷೇತ್ರ ಬಿಜೆಪಿ ಕಾರ್ಯದರ್ಶಿ ರಮನಾಥ ರಾಯಿ ಅಧ್ಯಕ್ಷತೆಯಲ್ಲಿ ಕುದ್ರೆಬೆಟ್ಟು ಎಂಬಲ್ಲಿ ನಡೆಯಿತು.
ಸೇವಾ ಸಪ್ತಾಹ ಕಾರ್ಯಕ್ರಮ ಹಾಗೂ ಗ್ರಾಪಂ ಚುನಾವಣಾ ಸಿದ್ಧತೆ ಬಗ್ಗೆ ಮಾಹಿತಿಯನ್ನು ಪಂಚಾಯತ್ ಚುನಾವಣಾ ಸಹ ಪ್ರಮುಖ ಪ್ರಭಾಕರ ಹಾಗೂ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ನೀಡಿದರು.
ಗೋಳ್ತಮಜಲು ಮಹಾ ಶಕ್ತಿಕೇಂದ್ರದ ಪ್ರಭಾರಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಯಶೋಧರ ಕರ್ಬೆಟ್ಟು, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಕ್ಷೇತ್ರ ಅಧ್ಯಕ್ಷ ಆನಂದ ಶಂಭೂರು, ಜಿಪಂ ಸದಸ್ಯೆ ಕಮಲಾಕ್ಷಿ ಜೆ.ಪೂಜಾರಿ, ಮಾಜಿ ಸದಸ್ಯ ಚೆನ್ನಪ್ಪ ಕೋಟ್ಯಾನ್, ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಮೇಶ್ ಕುದ್ರೆಬೆಟ್ಟು, ಪ್ರೇಮನಾಥ ಶೆಟ್ಟಿ, ಸುರೇಶ್ ಕೋಟ್ಯಾನ್ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
20/09/2020 06:20 pm