ಬಂಟ್ವಾಳ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿರುದ್ಧ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಸೆ.22ರ ಮಂಗಳವಾರ ಬೆಳಗ್ಗೆ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಬಡವರ, ಕೂಲಿಕಾರ್ಮಿಕರ, ಕೃಷಿಕರ, ನೆರೆಪೀಡಿತರ ಮತ್ತು ಜನಸಾಮಾನ್ಯರ ಪರ ಯಾವುದೇ ಯೋಜನೆಗಳನ್ನು ಸರ್ಕಾರ ರೂಪಿಸಿಲ್ಲ ಎಂದು ಆರೋಪಿಸಿ ಈ ಪ್ರತಿಭಟನೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.
Kshetra Samachara
20/09/2020 06:29 pm