ಮಂಗಳೂರು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವಿನಂತಿಯಂತೆ ಯಕ್ಷಗಾನ ಯುವ ಭಾಗವತರಾದ ಭವ್ಯಶ್ರೀ ಕುಲ್ಕುಂದ ಅವರು ಅರೆಭಾಷೆಯಲ್ಲಿ ಯಕ್ಷಗಾನ ಪ್ರಸಂಗ ರಚಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಪ್ರಾದೇಶಿಕ ಉಪಭಾಷೆಯಾದ ಅರೆಭಾಷೆಯಲ್ಲಿ ಇದೇ ಮೊದಲ ಬಾರಿಗೆ ಛಂದೋಬದ್ಧ ಯಕ್ಷಗಾನ ಪ್ರಸಂಗ ರಚಿಸಿರುವ ಭವ್ಯಶ್ರೀ ಕುಲ್ಕುಂದ, ತಾಳ ಮದ್ದಲೆ ಮೂಲಕ ಪ್ರಥಮ ಪ್ರಯೋಗ ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ.
ಪ್ರಸಂಗದ ಸಾಹಿತ್ಯ ಕನ್ನಡ ಭಾಷೆಯಲ್ಲಿದ್ದು, ಸಾಹಿತ್ಯವೂ ಅರೆಭಾಷೆಯಲ್ಲೇ ಇರಬೇಕೆನ್ನುವ ಅಕಾಡೆಮಿಯ ಯೋಜನೆಯಂತೆ ಭವ್ಯಶ್ರೀ ಅವರು ಕನ್ನಡದಿಂದ ಐದು ಪ್ರಸಂಗಗಳನ್ನು ಅರೆಭಾಷೆಗೆ ಅನುವಾದಿಸುತ್ತಿದ್ದಾರೆ.
ಈಗಾಗಲೇ ಶರಸೇತು ಬಂಧನ ಮತ್ತು ಪಂಚವಟಿ ಪ್ರಸಂಗದ ಅನುವಾದ ಪೂರ್ಣಗೊಂಡಿದೆ.
ಈ ಪೈಕಿ ಶರಸೇತು ಬಂಧನ ಪ್ರಸಂಗ ‘ಬಾಣದ ಪಾಲ’ ಹೆಸರಿನಲ್ಲಿ ತಾಳಮದ್ದಲೆ ವೀಡಿಯೊ, ಆಡಿಯೊ ರೆಕಾರ್ಡಿಂಗ್ ಕೂಡ ಪೂರ್ತಿಗೊಳಿಸಿದೆ.
Kshetra Samachara
22/09/2020 01:22 pm