ಕಾಟಿಪಳ್ಳ: ಎಸ್ ಡಿ ಪಿಐ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್-2020 ಪ್ರದಾನ

ಮಂಗಳೂರು : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ 5 ನೇ ವಾರ್ಡ್ ಕಾಟಿಪಳ್ಳ ವತಿಯಿಂದ ಆ ಭಾಗದ ಎಸ್ ಎಸ್ ಎಲ್ ಸಿ, ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎಸ್ ಡಿ ಪಿಐ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್-2020 ಪ್ರದಾನ ಮಾಡಲಾಯಿತು.

ಕಾಟಿಪಳ್ಳ ಯುನಿಟಿ ಹಾಲ್ ನಲ್ಲಿ ಜರುಗಿದ ಕಾರ್ಯಕ್ರಮವನ್ನು ಎಸ್ಡಿಪಿಐ ದ.ಕ. ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಕುಳಾಯಿ ಉದ್ಘಾಟಿಸಿ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು.

ಈ ಸಂದರ್ಭ ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಎಸ್ ಡಿ ಪಿಐ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್-2020 ನೀಡಿ ಪುರಸ್ಕರಿಸಲಾಯಿತು.

ಅಧ್ಯಕ್ಷತೆಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುರತ್ಕಲ್ ಪ್ರದೇಶ ಅಧ್ಯಕ್ಷ ಹನೀಫ್ ಕಾಟಿಪಳ್ಳ ವಹಿಸಿದ್ದರು. ಕಾರ್ಪೊರೇಟರ್ ಶಂಷಾದ್ ಅಬೂಬಕ್ಕರ್, ಅಬ್ದುಲ್ ಜಬ್ಬಾರ್ ಕೃಷ್ಣಾಪುರ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Kshetra Samachara

Kshetra Samachara

11 days ago

Cinque Terre

1.4 K

Cinque Terre

0