ಮಂಗಳೂರು: ದನ ಅಕ್ರಮ ಸಾಗಾಟ ಮಾಡುತ್ತಿರುವ ಬಗ್ಗೆ ಪೊಲೀಸ್ ಇಲಾಖೆಗೆ ಹಲವು ಬಾರಿ ಮನವಿ ಮಾಡಿದ್ದರೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಇಂದು ನಗರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ನಗರದ ಮಣ್ಣಗುಡ್ಡ ಬಳಿ ರಸ್ತೆ ಯಲ್ಲೇ ಕುಳಿತು ಪ್ರತಿಭಟಿಸಿದ ಸಂಘಟನೆಗಳ ಸದಸ್ಯರು, ದನಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿದೆ.
ಭಾನುವಾರ ಬೆಳಗ್ಗಿನ ಜಾವವೂ ದನಗಳನ್ನು ಸಾಗಾಟ ಮಾಡಲಾಗಿದೆ ಎಂದು ಆರೋಪಿಸಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಶೀಘ್ರ ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಪ್ರತಿಭಟನೆಯಿಂದ ಹಿಂದೆ ಸರಿದರು.
Kshetra Samachara
04/10/2020 11:26 am