ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ಪ್ರತ್ಯೇಕಿಸಿ ತ್ಯಾಜ್ಯ ನೀಡದಿದ್ದರೆ ಅಕ್ಟೋಬರ್ 2ರಿಂದ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಎಚ್ಚರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದ ಅವರು, ಪಾಲಿಕೆಯ ಘನತ್ಯಾಜ್ಯ ನಿರ್ವಹಣೆ ಹಾಗೂ ನೈರ್ಮಲೀಕರಣ ಬೈಲಾ 2019ರಂತೆ ಮನೆ, ಬೀದಿ ಬದಿ ವ್ಯಾಪಾರಸ್ಥರು ತ್ಯಾಜ್ಯ ವಿಂಗಡಿಸಿ ನೀಡದಿದ್ದಲ್ಲಿ ರೂ. 1,500ರಿಂದ ರೂ. 5,000 ವರೆಗೆ ದಂಡ ವಿಧಿಸಬಹುದಾಗಿದೆ ಎಂದು ಆಯುಕ್ತರು ತಿಳಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಚೀಲ ಮಾರಾಟ ಅಥವಾ ಉಪಯೋಗ ನಿಷೇಧಿಸಲಾಗಿದೆ. ಉದ್ದಿಮೆದಾರರು, ನಾಗರಿಕರು ಮಾರಾಟ ಅಥವಾ ಉಪಯೋಗಿಸುವುದು ಕಂಡು ಬಂದಲ್ಲಿ 1,500 ನಿಂದ 25 ಸಾವಿರ ರೂ. ವರೆಗೆ ದಂಡ ವಿಧಿಸಲಾಗುವುದು ಹಾಗೂ ಪ್ರಕರಣ ದಾಖಲಿಸಲಾಗುವುದು ಎಂದರು.
Kshetra Samachara
30/09/2020 11:00 pm