ಮಂಗಳೂರು: ಎಸ್‌ಕೆಎಸ್‌ಎಸ್‌ಎಫ್ ವಿಖಾಯ ರಕ್ತದಾನಿ ಬಳಗದ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಹಾಗೂ ಯೆನೆಪೋಯ ಬ್ಲಡ್ ಬ್ಯಾಂಕ್ ಸಹಭಾಗಿತ್ವದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ತದಾನ ಶಿಬಿರ ಅಭಿಯಾನದ ಸಮಾರೋಪ ಶನಿವಾರ ನಗರದ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಿತು.
ಸಮಾರೋಪ ಸಮಾರಂಭವನ್ನು ಎಸ್‌ಕೆಎಸ್‌ಎಸ್‌ಎಫ್ ಬಂಟ್ವಾಳ ವಲಯ ಅಧ್ಯಕ್ಷ ಇರ್ಷಾದ್ ದಾರಿಮಿ ದುಃವಾ ನೆರವೇರಿಸಿ ಉದ್ವಾಟಿಸಿದರು. ಎಸ್ಕೆಎಸ್ಸೆಸ್ಸೆಫ್ ವಿಖಾಯ ಜಿಲ್ಲಾ ಅಧ್ಯಕ್ಷ ಸೈಯ್ಯದ್ ಇಸ್ಮಾಯಿಲ್ ತಂಙಳ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಯು.ಟಿ. ಖಾದರ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಎಸ್‌ಕೆಎಸ್‌ಎಸ್‌ಎಫ್ ಕರ್ನಾಟಕ ರಾಜ್ಯ ಅಧ್ಯಕ್ಷ ಮೌಲನಾ ಅನೀಸ್ ಕೌಸರಿ, ಕೇಂದ್ರ ಸಮಿತಿ ಕಾರ್ಯದರ್ಶಿ ಖಾಸಿಂ ದಾರಿಮಿ ಸವಣೂರು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕೋ ಆರ್ಡಿನೇಟರ್ ಪ್ರವೀಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
03/10/2020 10:57 pm