ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ವಿಟ್ಲದಲ್ಲಿ ಜೂನ್ 6ರಂದು ಬೃಹತ್ ಹಿಂದೂ ಜನಜಾಗೃತಿ ಸಭೆ

ಹಿಂದೂ ಯುವತಿಯರನ್ನು ಲವ್ ಜಿಹಾದ್ ಮೂಲಕ ಮೋಸದ ಜಾಲಕ್ಕೆ ತಳ್ಳಿ ಜೀವನವನ್ನು ಹಾಳುವ ಮಾಡುವ ಕಾರ್ಯ ಮಾಡಲಾಗುತ್ತಿದೆ. ಹಿಂದೂ ಸಮಾಜ ಒಟ್ಟಾಗಿ ನಿಂತು ಇದನ್ನು ಖಂಡಿಸುವ ನಿಟ್ಟಿನಲ್ಲಿ ಜೂ.6ರಂದು ಬೆಳಗ್ಗೆ 10 ವಿಟ್ಲ ಸರ್ಕಾರಿ ಬಸ್ ನಿಲ್ದಾಣದ ಬಳಿ ಬೃಹತ್ ಹಿಂದೂ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ. ಕೆ. ಪ್ರಸನ್ನ ಹೇಳಿದ್ದಾರೆ.

ಪರಿವಾರ ಸಂಘಟನೆಗಳ ವತಿಯಿಂದ ಸಮಾಜಕ್ಕೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ 9 ಗಂಟೆಗೆ ಪುತ್ತೂರು ರಸ್ತೆಯ ಜೈನ ಬಸದಿ ಬಳಿಯಿಂದ, ಕಲ್ಲಡ್ಕ ರಸ್ತೆ ಪೆಟ್ರೋಲ್ ಪಂಪ್ ಬಳಿಯಿಂದ, ಸಾಲೆತ್ತೂರು ರಸ್ತೆಯ ವಿಠಲ ಪದವಿ ಪೂರ್ವ ಕಾಲೇಜು ಬಳಿಯಿಂದ ಸರ್ಕಾರಿ ಬಸ್ ನಿಲ್ದಾಣದ ತನಕ ಪಾದಯಾತ್ರೆ ನಡೆಯಲಿದೆ ಎಂದು ವಿಟ್ಲ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಮುಖಂಡರಾದ ಮುರಳಿ ಹಸಂತಡ್ಕ, ರಾಧಾಕೃಷ್ಣ ಅಡ್ಯಂತಾಯ, ಪತ್ರಕರ್ತೆ ತನ್ಮಯಿ ಪ್ರಮುಖವಾಗಿ ಭಾಗವಹಿಸಲಿದ್ದಾರೆ. ಸುಮಾರು 3 ಸಾವಿರ ಜನರು ಸೇರುವ ನಿರೀಕ್ಷೆ ಇಟ್ಟಿದ್ದು, ರಾಷ್ಟ್ರ ಭಕ್ತ ಹಿಂದೂ ಬಂಧು ಭಗಿನಿಯರು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ವಿವಿಧ ಸಂಘ ಸಂಸ್ಥೆಗಳ ಸಹಕಾರವನ್ನು ನಿರೀಕ್ಷಿಸಲಾಗಿದೆ ಎಂದರು.

ವಿ.ಹಿಂ.ಪ ಜಿಲ್ಲಾ ಸಹ ಕಾರ್ಯದರ್ಶಿ ಗೋವರ್ಧನ್, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಕಾರ್ಯದರ್ಶಿ ನರಸಿಂಹ ಮಾಣಿ, ಬಜರಂಗದಳ ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಕನ್ಯಾನ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

03/06/2022 04:54 pm

Cinque Terre

2.02 K

Cinque Terre

0

ಸಂಬಂಧಿತ ಸುದ್ದಿ