ಸೆ.17 ರಂದು ಪುದುಚೇರಿ ಮುಖ್ಯಮಂತ್ರಿ‌ ವಿ.ನಾರಾಯಣ ಸ್ವಾಮಿ ಮಂಗಳೂರು ಭೇಟಿ

ಮಂಗಳೂರು: ಪುದುಚೇರಿಯ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಗುರುವಾರ ಮಂಗಳೂರಿಗೆ ಆಗಮಿಸಲಿದ್ದಾರೆ.

ನಾಳೆ ಸಂಜೆ 7.45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ಮೂಕಾಂಬಿಕೆಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಸೆ.18ರ ಬೆಳಗ್ಗೆ 11:30ಕ್ಕೆ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದುರ್ಗೆಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಶುಕ್ರವಾರ 1 ಗಂಟೆಗೆ ಮಂಗಳೂರಿನಿಂದ ವಿಮಾನ ಮೂಲಕ ಬೆಂಗಳೂರಿಗೆ ಪಯಾಣ ಬೆಳೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Kshetra Samachara

Kshetra Samachara

11 days ago

Cinque Terre

1.6 K

Cinque Terre

0