ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಗಾಂಧೀಜಿಗೆ ಕಾಲ್ನಡಿಗೆ ಜಾಥಾದಲ್ಲಿ ಸಾಥ್ ನೀಡಿದ್ದ ಸ್ವಾತಂತ್ರ್ಯ ಹೋರಾಟಗಾರ ಇಬ್ರಾಹಿಂ ಹಾಜಿ ಇನ್ನಿಲ್ಲ

ಪುತ್ತೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಬೊಳ್ಳಾಡಿ ನಿವಾಸಿ ಇಬ್ರಾಹಿಂ ಹಾಜಿ (99) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಸ್ವಗೃಹದಲ್ಲಿ ನಿಧನರಾದರು.

ಅವರು 1934ರಲ್ಲಿ ಮಹಾತ್ಮ ಗಾಂಧೀಜಿ ಅವರು ಪುತ್ತೂರಿಗೆ ಅಗಮಿಸಿದ್ದ ವೇಳೆ ಅವರೊಂದಿಗೆ ಕಾಲ್ನಡಿಗೆ ಜಾಥಾದಲ್ಲಿ ಬೆಂಗಳೂರು ವರೆಗೆ ತೆರಳಿದ್ದರು.

ಬ್ರಿಟಿಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರತಿಭಟನೆ, ಧರಣಿ ಇತ್ಯಾದಿಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾ ಪೊಲೀಸರ ಬೆತ್ತ, ಚಾಟಿಯೇಟಿಗೂ ಮೈಯೊಡ್ಡಿದ್ದರು.

Edited By : Vijay Kumar
Kshetra Samachara

Kshetra Samachara

04/10/2020 05:49 pm

Cinque Terre

17.97 K

Cinque Terre

3

ಸಂಬಂಧಿತ ಸುದ್ದಿ