ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಪಿಎಂಸಿ ಕಾಯ್ದೆ ವಿರೋಧಿಸಿ ರಸ್ತೆ ತಡೆ ನಡೆಸಿದ ಸಂಘಟನೆಗಳು

ಮಂಗಳೂರು : ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ಹಲವು ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರ ಮಾಡಿರುವ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ನಾನಾ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು ಇಂದು ನಗರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದವು.

ನಗರದ ನಂತೂರು ವೃತ್ತದ ಬಳಿ ಜಮಾವನೆಗೊಂಡ ಪ್ರತಿಭಟನಾಕಾರರು ವಾಹನಗಳನ್ನು ತಡೆದು ರಸ್ತೆ ತಡೆ ನಡೆಸಿದರು.

ಬಳಿಕ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮುಖಂಡರು, ಕೇಂದ್ರ ಸರಕಾರ ಸುಗ್ರೀವಾಜ್ಞೆಗಳ ಮೂಲಕ ಬಡವರನ್ನು ಇನ್ನಷ್ಟು ಬಡವರಾಗಿಸಿ, ರೈತರನ್ನು ದಿವಾಳಿಯಾಗಿಸಿ ಕಾರ್ಪೊರೇಟ್ ಸಮುದಾಯದ ಬೆನ್ನಿಗೆ ನಿಂತು ಅವರ ಉದ್ದಾರಕ್ಕೆ ಶ್ರಮಿಸುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭ ಮಾಜಿ ಕಾಂಗ್ರೆಸ್ ಶಾಸಕ ಜೆ.ಆರ್.ಲೋಬೊ, ಡಿವೈಎಫ್ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಯುವ ಕಾಂಗ್ರೆಸ್ ದ.ಕ. ಜಿಲ್ಲಾ ಅಧ್ಯಕ್ಷ ಮಿಥುನ್ ರೈ, ವಿವಿಧ ರಾಜಕೀಯ ಪಕ್ಷಗಳ-ಸಂಘಟನೆಗಳ ಮುಖಂಡರಾದ ಸದಾಶಿವ ಉಳ್ಳಾಲ, ಎ.ಸಿ. ವಿನಯರಾಜ್, ಪ್ರವೀಣ್ ಚಂದ್ರ ಆಳ್ವ, ನವೀನ್ ಡಿಸೋಜ, ಅನಿಲ್ ಕುಮಾರ್, ಸುನೀಲ್ ಕುಮಾರ್ ಬಜಾಲ್, ಪಿ.ವಿ. ಮೋಹನ್, ಬಿ.ಕೆ.ಇಮ್ತಿಯಾಝ್

ಕೃಷ್ಣಪ್ಪ ಸಾಲ್ಯಾನ್ ಸೇರಿದಂತೆ ಹಲವು ಸಂಘ ಸಂಸ್ಥೆಗಳಮುಖಂಡರು, ರೈತ ಮುಖಂಡರು ಮೊದಲಾದವರು ಭಾಗವಹಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

25/09/2020 11:35 am

Cinque Terre

11.24 K

Cinque Terre

0

ಸಂಬಂಧಿತ ಸುದ್ದಿ