ಬಂಟ್ವಾಳ: ಇತ್ತೀಚೆಗೆ ನಿಧನ ಹೊಂದಿದ ಬಂಟ್ವಾಳ ತಾಲೂಕು ಕಚೇರಿಯ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ಅವರಿಗೆ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ತಾಲೂಕು ಕಚೇರಿ ಸಿಬ್ಬಂದಿ ಮೌನ ಪ್ರಾರ್ಥನೆ ಮತ್ತು ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಮರ್ಪಿಸಿದರು.
ಈ ಸಂದರ್ಭ ಮಾತನಾಡಿದ ತಹಸೀಲ್ದಾರ್ ರಶ್ಮಿ ಎಸ್ ಆರ್., ಬೇರೆ ಬೇರೆ ತಾಲೂಕಿನಲ್ಲಿ ನಿಷ್ಠಾವಂತರಾಗಿ ಕರ್ತವ್ಯ ಸಲ್ಲಿಸಿ, ಬಂಟ್ವಾಳದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರರಾಗಿ ಸೇವೆ ಸಲ್ಲಿಸಿದ ರಾಧಾಕೃಷ್ಣ ರ ಅಗಲಿಕೆ ಸಹಿಸುವ ಶಕ್ತಿಯನ್ನು ಭಗವಂತ ಎಲ್ಲರಿಗೂ ನೀಡಲಿ ಎಂದರು.
ಬಂಟ್ವಾಳ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಮಾತನಾಡಿ, ನೌಕರ ಸ್ನೇಹಿಯಾಗಿ ಸರಳತೆಯಿಂದ ಕರ್ತವ್ಯ ನಿರ್ವಹಿಸಿದ ರಾಧಾಕೃಷ್ಣ ಅವರ ಅಗಲಿಕೆ ತುಂಬಲಾಗದ ನಷ್ಟ ಎಂದರು. ತಾಲೂಕು ಕಚೇರಿ ಸಿಬ್ಬಂದಿ, ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು. ಗ್ರಾಮಕರಣಿಕರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರ್ವಹಿಸಿದರು.
Kshetra Samachara
21/09/2020 06:08 pm