ಸುಬ್ರಹ್ಮಣ್ಯ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿರುವ ರವೀಂದ್ರ ಎಂ.ಎಚ್ . ಅವರನ್ನು ಮೈಸೂರು ಜಿಲ್ಲೆಯ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಆಗಿದ್ದು, ಇವರನ್ನು ಈ ಹಿಂದೆ ಮೈಸೂರು ಜಿಲ್ಲೆಯ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ವರ್ಗಾವಣೆಗೊಳಿಸಲಾಗಿತ್ತು.
ಈ ಸಮಯದಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯದ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಉಪವಿಭಾಗಾಧಿಕಾರಿ ಅಧಿಕಾರ ವಹಿಸಿಕೊಂಡಿದ್ದರು.
ನಂತರದಲ್ಲಿ ರವೀಂದ್ರ ಅವರನ್ನು ಕುಕ್ಕೆ ಸುಬ್ರಹ್ಮಣ್ಯಕ್ಕೆ ಮರು ನಿಯೋಜನೆ ಮಾಡಲಾಗಿತ್ತು. ಇದೀಗ ಪುನಃ ಅವರನ್ನು ಮೈಸೂರಿಗೆ ವರ್ಗಾಯಿಸಲಾಗಿದೆ.
ರವೀಂದ್ರ ಎಂ.ಎಚ್ .ಅವರ ಸ್ಥಾನಕ್ಕೆ ಬೆಂಗಳೂರು ಬನಶಂಕರಿಯಲ್ಲಿನ ಶ್ರೀ ಬನಶಂಕರಿ ದೇಗುಲದ ಕಾರ್ಯನಿರ್ವಾಹಣಾಧಿಕಾರಿ ನಿಂಗಯ್ಯ ಅವರನ್ನು ನಿಯೋಜನೆಗೊಳಿಸಿ ಸರಕಾರ ಆದೇಶಿಸಿದೆ.
Kshetra Samachara
01/10/2020 04:18 pm